ಬೆಂಗಳೂರು, ಜನವರಿ 04: ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ಜನವರಿ 31ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ. ಇದು ಆರನೇ ಬಾರಿಯ ವಿಸ್ತರಣೆಯಾಗಿದ್ದು, ವಾಹನ ಮಾಲೀಕರು ತಮ್ಮ ವಾಹನಗಳಿಗೆ HSRP ಅಳವಡಿಸಿಕೊಳ್ಳಲು ಇನ್ನೂ ಅವಕಾಶವಿದೆ. HSRP ಅಳವಡಿಕೆಯು ಕಡ್ಡಾಯವಾಗಿರುತ್ತದೆ, ಅದನ್ನು ಅಳವಡಿಸದಿದ್ದರೆ ವಾಹನ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ ಮೊದಲಾದ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ, ಎಂದು ತಿಳಿದುಕೊಳ್ಳಿ. ಆನ್ ಲೈನ್ ಮೂಲಕ HSRP ಅಳವಡಿಕೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಇದೆ. ಬರೊಬ್ಬರಿ ಆರು ಬಾರಿ ಗಡುವು ವಿಸ್ತರಿಸಿದೆ. 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು.
ಏನಿದು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್?
ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೇಟ್ಗಳನ್ನು ಅಳವಡಿಸಬೇಕಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.
ಒಂದು ವೇಳೆ ಹೆಚ್ಎಸ್ಆರ್ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ ಎಂದು ಇಲಾಖೆ ಹೇಳಿದೆ.